ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ..!

Prasthutha|

ಕಾರವಾರ: ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ್ದಾರೆ.

- Advertisement -

ಬನವಾಸಿಯ ಕದಂಬೋತ್ಸವ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಈ ಬ್ಯಾನರ್ ಹಾಕಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ನಿರೀಕ್ಷೆಯಂತೆ ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್ ಅವರು ತಮ್ಮ ಬಿಜೆಪಿ ಅಭ್ಯರ್ಥಿಗೆ ಮತಹಾಕುವ ಬದಲಿಗೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಶಾಕ್ ಕೊಟ್ಟಿದ್ದರು. ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್, ಮತದಾನ ಮಾಡದೇ ಬಿಜೆಪಿಗೆ ಆಘಾತ ನೀಡಿದ್ದರು. ಈ ಇಬ್ಬರು ಶಾಸಕರು ಹಲವು ದಿನಗಳಿಂದ ಕಾಂಗ್ರೆಸ್ ನಾಯಕರ ಜೊತೆ ನಿರಂತರ ಸಂಪರ್ಕದಲ್ಲಿದ್ದರು. ಅಲ್ಲದೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.



Join Whatsapp