ಕರ್ನಾಟಕದ ಎಲ್ಲ ಶಾಲೆಗಳ 5,8,9 ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್

Prasthutha|

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿನ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

- Advertisement -


ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಸುತ್ತೋಲೆಯನ್ನು ಪ್ರಶ್ನಿಸಿ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಪ್ರಸ್ತುತ ತೀರ್ಪು ನೀಡಿದೆ.



Join Whatsapp