5,8,9 ಹಾಗೂ 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಕೋರ್ಟ್​ ಅನುಮತಿ

Prasthutha|

ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೂಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದ್ದು, ಅನುಮತಿ ನೀಡಿದೆ.

- Advertisement -

ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಮೂಲಕ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಆದೇಶವನ್ನು ಮಾ.06 ಬುಧವಾರ ರಂದು ಹೈಕೋರ್ಟ್ ರದ್ದುಗೊಳಿಸಿತ್ತು.

ಆದರೆ ಈ ಕುರಿತು ಸಲ್ಲಿಕೆಯಾದ ಮೇಲ್ಮನವಿಯನ್ನು ಇಂದು ವಿಚಾರಣೆ ನಡೆಸಿದ ವಿಭಾಗೀಯ ಪೀಠ ಬುಧವಾರ ಏಕದಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ.

- Advertisement -

ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅ.6 ಮತ್ತು 9ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಆದರೆ ಈ ಸುತ್ತೋಲೆಯನ್ನು ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ ಹಾಗೂ ‘ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸಮಿ ಅವರ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿ ತೀರ್ಪು ನೀಡಿತ್ತು.



Join Whatsapp