ಲೋಕಸಭಾ ಚುನಾವಣೆ: ಬಂಗಾಳದಿಂದ ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ

Prasthutha|

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು indiatoday.in ವರದಿ ಮಾಡಿದೆ.

- Advertisement -


ಶಮಿ ರಣಜಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಾರೆ ಮತ್ತು ರಾಜ್ಯಕ್ಕಾಗಿ ದೇಶೀಯ ಕ್ರಿಕೆಟ್ ಆಡುವುದನ್ನು ಮುಂದುವರಿಸಿದ್ದಾರೆ. ಬಿಜೆಪಿ ಶಮಿಯನ್ನು ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಅವರು ತಮ್ಮ ನಿರ್ಧಾರವನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ಪ್ರಸ್ತುತ ಶಮಿ ಶಸ್ತ್ರಕ್ರಿಯೆಯೊಂದರ ನಂತರ ಚೇತರಿಸುತ್ತಿದ್ದಾರೆ.


ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಶಮಿ ಅವರ ಹುಟ್ಟೂರಾದ ಅಮ್ರೋಹಾದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದ ನಿರ್ಧಾರವನ್ನು ಘೋಷಿಸಿದ್ದಾರೆ.
ಶಮಿ ಅವರನ್ನು ಬಂಗಾಳದಲ್ಲಿ ಕಣಕ್ಕಿಳಿಸಿದಲ್ಲಿ ರಾಜ್ಯದ ಅಲ್ಪಸಂಖ್ಯಾತ ಬಾಹುಳ್ಯದ ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ ಗಳಿಸಲು ಸುಲಭವಾಗಬಹುದೆಂಬ ಅಭಿಪ್ರಾಯ ಪಕ್ಷದಲ್ಲಿದೆ ಎನ್ನಲಾಗಿದೆ.



Join Whatsapp