ಮೈಸೂರು: ಮಾಜಿ ಶಾಸಕ ಕಾಂಗ್ರೆಸ್ನ ವಾಸು ಅನಾರೋಗ್ಯದಿಂದ ಶನಿವಾರ ನಿಧನರಾದರು.
ಅವರು ಚಾಮರಾಜ ಕ್ಷೇತ್ರದ ಶಾಸಕರಾಗಿ ಕೆಲಸ ಮಾಡಿದ್ದರು. ವಿದ್ಯಾವಿಕಾಸ ಎಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿರಲಿಲ್ಲ.
ಇದರಿಂದ ಆಕ್ರೋಶಗೊಂಡ ಅವರು ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಿಂದ ದೂರ ಉಳಿದಿದ್ದರು.