ಮೂರ್ನಾಲ್ಕು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮ: ಬಿ.ವೈ.ವಿಜಯೇಂದ್ರ

Prasthutha|

ಬೆಂಗಳೂರು: 3-4 ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 3-4 ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾಗಿದೆ ವಾತಾವರಣವಿದೆ. ನರೇಂದ್ರ ಮೋದಿಯವರ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಉತ್ತಮ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಆಯ್ಕೆ ಮುಂದುವರೆದಿದೆ ಎಂದರು.

- Advertisement -


ರಾಜ್ಯದ ಎಲ್ಲ ಅಭ್ಯರ್ಥಿ ಬಗ್ಗೆಯೂ ವರಿಷ್ಠರು ಅವಲೋಕಿಸಿದ್ದಾರೆ. 23-24-25 ಪ್ರಶ್ನೆ ಅಲ್ಲ, ಅತ್ಯುತ್ತಮ ಫಲಿತಾಂಶದ ಇತಿಹಾಸವನ್ನು ಬಿಜೆಪಿ ನಿರ್ಮಿಸಲಿದೆ. 3-4 ದಿನಗಳಲ್ಲಿ ಅಭ್ಯರ್ಥಿ ಅಯ್ಕೆ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.



Join Whatsapp