ಮುಂಬೈ: ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಮನು ತುಳಸಿರಾಮ್ ರಜಪೂತ್ ಎಂದು ಗುರುತಿಸಲಾಗಿದೆ.
ನಾಗ್ಪುರ ಬಿಜೆಪಿ ಘಟಕವು ರೇಶಿಂಬಾಗ್ ಪ್ರದೇಶದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕರಿಗೆ ಪಾತ್ರೆಗಳನ್ನು ವಿತರಿಸಲಾಗಿದ್ದು, ಸ್ಥಳದಲ್ಲಿ ಅಪಾರ ಜನಸ್ತೋಮ ನೆರೆದಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.