ಉಲ್ಲಾಳದಲ್ಲಿ ಗ್ಯಾರಂಟಿ ಸಮಾವೇಶಕ್ಕೆ ಗಣ್ಯರಿಂದ ಚಾಲನೆ

Prasthutha|

ಮಂಗಳೂರು: ಇಲ್ಲಿಗೆ ಹತ್ತಿರದ ಉಲ್ಲಾಳದ ಕಲ್ಲಾಪ್ಪುವಿನಲ್ಲಿ ಸರ್ಕಾರದ ಗ್ಯಾರಂಟಿ ಸಮಾವೇಶಕ್ಕೆ ಸಂಜೆ ಚಾಲನೆ ನೀಡಲಾಯಿತು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಮೂಡಾ ಅಧ್ಯಕ್ಷ ಸದಾಶಿವ ಉಲ್ಲಾಳ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿ.ಪಂ. ಸಿಇಒ ಡಾ. ಆನಂದ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

- Advertisement -

ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಗಟ್ಟಿ, ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್,
ತಹಶೀಲ್ದಾರ್ ಪುಟ್ಟ ರಾಜು, ಸಿಡಿಪಿಒ ಶೈಲಾ, ಎಡಿಸಿ ಸಂತೋಷ್ ಕುಮಾರ್ ಸೇರಿದಂತೆ ಗಣ್ಯರು ವೇದಿಕೆಯಲ್ಲಿದ್ದರು.

ಸ್ಪೀಕರ್ ಯುಟಿ ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಆಯುಕ್ತ ಹರ್ಷವರ್ಧನ್ ಸ್ವಾಗತಿಸಿದರು. ಉಲ್ಲಾಳ ಪೌರಾಯುಕ್ತ ವಾಣಿ ಆಳ್ವ ವಂದಿಸಿದರು.

- Advertisement -

ಸರಕಾರದ 5 ಯೋಜನೆಗಳ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.



Join Whatsapp