ಬೀದರ್: 1,596 ಕೆಜಿ ಗಾಂಜಾ ವಶ

Prasthutha|

ಬೀದರ್: ಎನ್​ಸಿಬಿ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನೆಡೆಸಿ 1,596 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

- Advertisement -

ಆಂಧ್ರಪ್ರದೇಶದಿಂದ ರಾಜ್ಯಕ್ಕೆ ಸಾವಿರಾರು ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಗಾಂಜಾ ಸಾಗಾಟ ಮಾಡ್ತಿದ್ದ ಲಾರಿಯನ್ನು ಸೀಜ್ ಮಾಡಿದ್ದಾರೆ.

ಬೆಂಗಳೂರು ವಲಯದ ಡೈರೆಕ್ಟರ್ ಶೈಲೇಂದ್ರ ಕೆ.ಮಿಶ್ರಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಯಾರ ನೇತೃತ್ವದಲ್ಲಿ ಈ ಗಾಂಜಾ ತರಿಸಲಾಗ್ತಿತ್ತು, ಯಾರಿಗೆ ತಲುಪಿಸಲು ಸೂಚನೆ ಇತ್ತು, ಆಂಧ್ರದಲ್ಲಿ ಹಣಕಾಸು ವ್ಯವಹಾರ ಮಾಡಿದ್ದು ಯಾರು ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ.

- Advertisement -

ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಗಾಂಜಾ ಖರೀದಿ ಹಾಗೂ ವಿತರಣೆ ಸಣ್ಣ ಪುಟ್ಟ ಪೆಡ್ಲರ್ಸ್​ಗಳಿಂದ ಅಸಾಧ್ಯ, ಇದರ ಹಿಂದೆ ದೊಡ್ಡ ದೊಡ್ಡವರ ಕೈವಾಡ ಇದೆ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.



Join Whatsapp