ಮಂಗಳೂರು: ಇಂದು 11-03-2024 ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನ ವಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದರ ನಿರ್ದೇಶನದಂತೆ ಮಂಗಳೂರು ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ಗಾ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಎಸ್.ಎಂ. ರಶೀದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿಯಲ್ಲಿಯೂ ನಾಳೆಯಿಂದ ರಮಝಾನ್ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಆದ್ದರಿಂದ ಅವಳಿ ಜಿಲ್ಲೆಯಲ್ಲಿ ನಿರೀಕ್ಷೆಯಂತೆ ನಾಳೆಯಿಂದ ಉಪವಾಸ ಆರಂಭಗೊಳ್ಳಲಿದ್ದು, ಇಂದು ಇಶಾ ನಮಾಝಿನ ಬಳಿಕ ತರಾವೀಹ್ ನಮಾಝ್ ಇರಲಿದೆ.