ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಇಶಾಖ್ ದರ್‌ ಆಯ್ಕೆ

Prasthutha|

ಇಸ್ಲಾಮಾಬಾದ್: ಪಾಕಿಸ್ತಾನದ ಅಧ್ಯಕ್ಷ, ಪ್ರಧಾನಿ ಯಾರು ಎಂಬುದಷ್ಟೇ ಮಹತ್ವದ ಪ್ರಶ್ನೆ ಅಲ್ಲಿನ ವಿದೇಶಾಂಗ ಸಚಿವ ಯಾರೆಂಬುದು.ಭಾರತ, ಅಫ್ಗಾನಿಸ್ತಾನ ಸೇರಿದಂತೆ ನೆರೆಯ ದೇಶಗಳೊಂದಿಗೆ ಹಲವು ಸಮಸ್ಯೆ ಎದುರಿಸುತ್ತಿರುವ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವ ಸ್ಥಾನವು ಮಹತ್ವದ್ದಾಗಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸಂಪುಟ ವಿಸ್ತರಣೆ ಮಾಡಿದ್ದು, ವಿದೇಶಾಂಗ ಸಚಿವರ ಆಯ್ಕೆಯಾಗಿದೆ.

- Advertisement -

ಈ ಹಿಂದೆ ನಾಲ್ಕು ಬಾರಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಇರುವ ಮುಹಮ್ಮದ್ ಇಶಾಖ್ ದರ್ ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿದ್ದಾರೆ.

ಕಾಶ್ಮೀರಿ ಜನಾಂಗದ ದರ್ ಅವರು ವೃತ್ತಿಯಿಂದ ಚಾರ್ಟಡ್ ಅಕೌಂಟೆಂಟ್ ಆಗಿದ್ದು, ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್‌-ಎನ್‌) ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಜತೆಗೆ ಪಕ್ಷದ ವರಿಷ್ಠ ನವಾಜ್ ಷರೀಫ್ ಅವರ ನಿಷ್ಠಾವಂತ ಬೆಂಬಲಿಗರಾಗಿದ್ದಾರೆ.



Join Whatsapp