ಚೀನಾದ ರೆಸ್ಟೋರೆಂಟ್​ ನಲ್ಲಿ ಸ್ಫೋಟ: ಓರ್ವ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Prasthutha|

ಚೀನಾದ ರೆಸ್ಟೋರೆಂಟ್​ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

ಚೀನಾದ ಉತ್ತರದ ಪಟ್ಟಣವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಹೆಬೈ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಈ ಸ್ಫೋಟಕ್ಕೆ ಫ್ರೈಡ್​ ಚಿಕನ್ ಅಂಗಡಿಯಲ್ಲಿ ಅನಿಲ ಸೋರಿಕೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ 36 ತುರ್ತು ವಾಹನಗಳು ಮತ್ತು 154 ಸಿಬ್ಬಂದಿಯನ್ನು ರವಾನಿಸಲಾಗಿದೆ. ನಗರದ ಲಾಂಗ್​ಫಾಂಗ್​ ಅಗ್ನಿಶಾಮಕ ಇಲಾಖೆ ತಿಳಿಸಿದೆ.



Join Whatsapp