ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

Prasthutha|

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

- Advertisement -


ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಇಲಾಖೆ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.



Join Whatsapp