ಬೆಂಗಳೂರು: ನಾಳೆ ಡಾ. ಸಿ. ಎನ್ ಮಂಜುನಾಥ್ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಂಜುನಾಥ್ ಅವರು ಬಿಜೆಪಿ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ.
ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭಾ ಪ್ರತಿಪಕ್ಷ ನಾಯಕ ಅಶೋಕ್ ಸೇರಿದಂತೆ ಪ್ರಮುಖ ನಾಯಕರ ಸಮ್ಮುಖದಲ್ಲಿ ಮಂಜುನಾಥ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.