ಕುಣಿಗಲ್ : ಬಿಗ್ ಬಾಸ್ ಸ್ಪರ್ಧಿ ತುಕಾಲಿ ಸಂತೋಷ್ ದಂಪತಿ ಪ್ರಯಾಣಿಸುತ್ತಿದ್ದ ಕಾರು ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಕೊತ್ತಗೆರೆ ಹೋಬಳಿ ಕುರುಡಿಹಳ್ಳಿ ಸಮೀಪ ಸಂಭವಿಸಿದೆ.
ಕೊತ್ತಗೆರೆ ಹೋಬಳಿ ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ ಮೃತರು.
ಬುಧವಾರ ತುಕಾಲಿ ಸಂತೋಷ್ ಹಾಗೂ ಅವರ ಪತ್ನಿ ಸಿನಿಮಾ ಚಿತ್ರೀಕರಣ ಮುಗಿಸಿಕೊಂಡು ತನ್ನ ಗ್ರಾಮ ಹೊಳೆನರಸಿಪುರಕ್ಕೆ ಕಾರಿನಲ್ಲಿ ತೆರಳುತ್ತಿರಬೇಕಾದರೆ ಕುಣಿಗಲ್ ಕಡೆಯಿಂದ ಕೋಡಹಳ್ಳಿಪಾಳ್ಯ ಗ್ರಾಮಕ್ಕೆ ಹೋಗುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ ಪರಿಣಾಮ ಆಟೋ ಚಾಲಕ ಮೃತಪಟ್ಟಿದ್ದಾನೆ.