ಡೆಹ್ರಾಡೂನ್: ಉತ್ತರಾಖಂಡ ರಾಜ್ಯದ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರವು ಪ್ರಕಟಣೆ ಮೂಲಕ ಈ ಮಾಹಿತಿ ನೀಡಿದೆ.
ರಾಜ್ಯ ಸರ್ಕಾರ ಅಂಗೀಕರಿಸಿದ್ದ ಮಸೂದೆಯನ್ನು ರಾಜ್ಯಪಾಲ ಗುರ್ಮೀತ್ ಸಿಂಗ್ ಅವರು ಫೆಬ್ರುವರಿ 29ರಂದು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಿಕೊಟ್ಟಿದ್ದರು. ಇದೀಗ, ಸ್ವಾತಂತ್ರ್ಯಾನಂತರ ಯುಸಿಸಿ ಕಾಯ್ದೆ ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಿದೆ.
ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸರ್ಕಾರವು ಫೆಬ್ರುವರಿ 6ರಂದು ವಿಶೇಷ ಅಧಿವೇಶನದ ಸಂದರ್ಭ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿತ್ತು