ನ್ಯಾಯಾಂಗ ನಿಂದನೆ ಆರೋಪ: ತುಷಾರ್ ಗಿರಿನಾಥ್ ಗೆ ನೋಟಿಸ್

Prasthutha|

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

- Advertisement -


ನಗರದ ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಚಟುವಟಿಕೆ ಕೈಗೊಳ್ಳದಂತೆ ಕೋರ್ಟ್ ಆದೇಶವಿದ್ದರೂ ಅದನ್ನು ಉಲ್ಲಂಘಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಲಾದ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಗಿರಿನಾಥ್ ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಸಂಬಂಧ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.



Join Whatsapp