ದೆಹಲಿ: ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.
ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಿವೆಯೆನ್ನುವಾಗ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ಅಚ್ಚರಿಯ ರಾಜೀನಾಮೆ ನಂತರ ಈ ಆಯ್ಕೆಗಳು ನಡೆದಿವೆ. ಗೋಯೆಲ್ ಅವರ ಸೇವಾವಧಿ ಡಿಸೆಂಬರ್ 2027ರವರೆಗೆ ಇದ್ದರೂ ಅವರು ಮಾರ್ಚ್ 9ರಂದು ರಾಜೀನಾಮೆ ನೀಡಿದ್ದರು