ಕೊಪ್ಪಳ: ಲೋಕಸಭಾ ಚುನಾವಣೆಗೆ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್ ನಿರಾಕರಣೆ ಮಾಡಿರುವುದರಿಂದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಭಾರತಮಾತೆ ಭಾವಚಿತ್ರಕ್ಕೆ ಇದ್ದ ಗಾಜಿನ ಗ್ಲಾಸ್, ಕಚೇರಿಯ ಕಿಟಕಿಯ ಗಾಜುಗಳನ್ನು ಕಾರ್ಯಕರ್ತರು ಒಡೆದು ಹಾಕಿದರು.
ಪಕ್ಷದ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ರಾಜೀನಾಮೆ ನೀಡಿ ಸಂಸದರಿಗೆ ಆದ ಅನ್ಯಾಯ ಸರಿಪಡಿಸಬೇಕು ಎಂದರು. ಪಕ್ಷ ಘೋಷಣೆ ಮಾಡಿರುವ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಪಕ್ಷದಲ್ಲಿ ಯಾರಿಗೂ ಗೊತ್ತೇ ಇಲ್ಲ. ಆದರೂ ಟಿಕೆಟ್ ನೀಡಲಾಗಿದೆ. ಸಂಗಣ್ಣ ಕರಡಿ ಅವರ ರಾಜಕೀಯ ಬದುಕು ಅಂತ್ಯಗೊಳಿಸಲು ಎಲ್ಲರೂ ಸೇರಿ ಹುನ್ನಾರ ಮಾಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.