ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪತ್ನಿ ಪ್ರಣೀತ್ ಕೌರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಇದಕ್ಕೂ ಮುನ್ನ ಪಟಿಯಾಲ ಸಂಸದೆ ಪ್ರಣೀತ್ ಕೌರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದ ಅವರು ಶೀಘ್ರದಲ್ಲೇ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹ ಇತ್ತು. ಪ್ರಣೀತ್ ಕೌರ್ ಪಂಜಾಬ್ನ ಪಟಿಯಾಲಾ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಸಂಸದರಾಗಿದ್ದಾರೆ.