ಬಳ್ಳಾರಿ: ಸಂಸದ ಅನಂತಕುಮಾರ ಹೆಗಡೆಯ ದಲಿತ ವಿರೋಧಿ, ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ಹೇಳಿಕೆಗಳು ಸಮಾಜದಲ್ಲಿ ಶಾಂತಿ ಕದಡುತ್ತಿದೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆದಿದ್ದು, ದಲಿತ ಸಂಘರ್ಷ ಸಮಿತಿ (ಸಾಗರ ಬಣ) ರಾಜ್ಯ ಸಂಘಟನಾ ಸಂಚಾಲಕ ಎ. ಮಾನಯ್ಯ ಮಾತನಾಡಿ,ಅನಂತಕುಮಾರ್ ಹೆಗಡೆ ಸಂವಿಧಾನದ ವಿರುದ್ಧ ಹೇಳಿಕೆ ನೀಡುತ್ತಿರುವುದು ನಿಲ್ಲಬೇಕು ಎಂದು ಆಗ್ರಹಿಸಿದರು.
ಇಂಥ ಹೇಳಿಕೆ ನೀಡುವುದನ್ನು ಅವರು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.
ಅನಂತಕುಮಾರ್ ಹೆಗಡೆ ಅವರ ವಿರುದ್ಧ ಬಿಜೆಪಿ ವರಿಷ್ಠರೇ ಕ್ರಮಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿಯೇ ಅನಂತಕುಮಾರ್ ಹೆಗಡೆ ಮೂಲಕ ಇಂಥ ಹೇಳಿಕೆಗಳನ್ನು ಕೊಡುಸುತ್ತಿದೆ ಎಂದಾಗುತ್ತದೆ ಎಂದು ಸಂಘಟನೆ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ತಕ್ತಪಡಿಸಿದರು.