ಜೀವಂತ ವ್ಯಕ್ತಿ ಪೋಸ್ಟ್ ಮಾರ್ಟಮ್ ಗೆ | ಆಸ್ಪತ್ರೆ ಸಿಬ್ಬಂದಿ ಎಡವಟ್ಟು

Prasthutha|

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

- Advertisement -

ಶಂಕರ್ ಗೊಂಬಿ ಎಂಬ 27 ವರ್ಷದ ವ್ಯಕ್ತಿ ಕಾರು ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ವೈದ್ಯರು ವೆಂಟಿಲೇಟರ್ ಅಳವಡಿಸಿ ಶಂಕರ್ ಅವರನ್ನು ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಶಂಕರ್ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದರು.

ಇನ್ನೇನು ಪೋಸ್ಟ್ ಮಾರ್ಟಮ್ ಮಾಡಬೇಕೆಂದು ಮುಂದಾದಾಗ ಶವಾಗಾರದ ವೈದ್ಯರಿಗೆ ಶವದ ಕೈಕಾಲು ಅಲುಗಾಡುತ್ತಿರುವುದು ಕಂಡು ಬಂದಿದೆ. ಶಾಕ್ ಆದ ವೈದ್ಯರು ಪರೀಕ್ಷಿಸಿದಾಗ ವ್ಯಕ್ತಿ ಬದುಕಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಅವರನ್ನು ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಶಂಕರ್ ಗೊಂಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತಿದ್ದಾರೆ.



Join Whatsapp