ಯಡಿಯೂರಪ್ಪ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಿದ್ದಾರೆ: ಪರಮೇಶ್ವರ್

Prasthutha|

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ. ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂಬುದು ತಿಳಿದುಬಂದಿದೆ. ಮಹಿಳೆಯೊಬ್ಬರು ನೀಡಿರುವ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದರು.

ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

- Advertisement -

ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.



Join Whatsapp