ನವದೆಹಲಿ: ಮಾಲ್ದೀವ್ಸ್ ನಲ್ಲಿ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರನ್ನು ಕಾರ್ಯಾಚರಿಸುತ್ತಿದ್ದ ಭಾರತೀಯ ಸೇನಾ ಸಿಬ್ಬಂದಿ ಮೊದಲ ತಂಡ ಭಾರತಕ್ಕೆ ಮರಳಿದೆ.ಮಿಲಿಟರಿ ತಂಡದ ಬದಲು ಅಲ್ಲಿ ನಾಗರಿಕ ತಾಂತ್ರಿಕ ತಜ್ಞರನ್ನು ನಿಯೋಜಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಯ ಮೊದಲ ತಂಡವನ್ನು ವಾಪಸ್ ಕರೆಸಿಕೊಳ್ಳಲು ಮಾಲ್ದೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಮಾ.10ರ ಗಡುವನ್ನು ವಿಧಿಸಿದ್ದರು.
ಮುಯಿಝ್ಝು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ತನ್ನ ದೇಶದಿಂದ ಭಾರತೀಯ ಸೇನಾ ಸಿಬ್ಬಂದಿಯನ್ನು ತೆರವುಗೊಳಿಸುವ ತನ್ನ ಚುನಾವಣಾ ಭರವಸೆಯನ್ನು ಉಳಿಸಿಕೊಳ್ಳುವುದಾಗಿ ಹೇಳಿದ್ದರು.