ಆಸ್ಪತ್ರೆಯಿಂದ ವಾಪಸ್‌ ಬರ್ತೀನಿ, ಅದುವರೆಗೂ ನಿಮ್ಮ ಆಟ ನಡೆಯಲಿ: ಡಿಸಿಎಂಗೆ ಹೆಚ್ಡಿಕೆ ಸವಾಲು

Prasthutha|

ಬೆಂಗಳೂರು: ಮಿಸ್ಟರ್‌ ಡಿ.ಕೆ. ಶಿವಕುಮಾರ್‌, ನನಗೆ ಚುನಾವಣೆ ಮಾಡುವುದು ಬರುವುದಿಲ್ಲ ಎಂದುಕೊಳ್ಳಬೇಡಿ. ಫೀಲ್ಡಿಗೆ ಇಳಿದರೆ ನಿಮಗಿಂತ ಚೆನ್ನಾಗಿ ಚುನಾವಣೆ ಮಾಡಬಲ್ಲೆ. ಆಸ್ಪತ್ರೆಯಿಂದ ನಾನು ವಾಪಸ್‌ ಬರ್ತೀನಿ, ಅದುವರೆಗೂ ನಿಮ್ಮ ಆಟ ನಡೆಯಲಿ ನೋಡೋಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಶಿವಕುಮಾರ್‌‌ಗೆ ಸವಾಲು ಹಾಕಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭಾರಿ ಚುನಾವಣಾ ಅಕ್ರಮ ನಡೆಸುತ್ತಿದ್ದಾರೆ. ಕುಕ್ಕರ್‌ ಮತ್ತು ಹಣ ಹಂಚಿಕೆ ಮಾಡುತ್ತಿದ್ದಾರೆ. ಇದರ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ತಾವೇ ಕ್ರಮ ಕೈಗೊಳ್ಳಬೇಕಾದೀತು ಎಂದು ಚುನಾವಣಾ ಆಯೋಗಕ್ಕೆ ಎಚ್ಚರಿಕೆ ನೀಡಿದರು. ಡಿ.ಕೆ. ಶಿವಕುಮಾರ್‌ ಅವರಿಗೂ ಸವಾಲು ಹಾಕಿದರು.



Join Whatsapp