ಬಸ್ ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್ ಸ್ಫೋಟ: ಹಲವರಿಗೆ ಗಾಯ

Prasthutha|

ತುಮಕೂರು: ಖಾಸಗಿ ಬಸ್ ನಲ್ಲಿ ಶೌಚಾಲಯಕ್ಕೆ ಬಳಸುವ ಆ್ಯಸಿಡ್ ಬಾಟಲ್ ಸ್ಫೋಟವಾಗಿ ಹಲವರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತುಮಕೂರು ತಾಲೂಕಿನ ಗೂಳೂರು ಬಳಿ ನಡೆದಿದೆ.

- Advertisement -

ಕೂಡಲೇ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಹಿಳೆಯೊಬ್ಬರು ಕುಣಿಗಲ್ ನಿಂದ ತುಮಕೂರಿಗೆ ಬರುವ ಖಾಸಗಿ ಬಸ್ ಹತ್ತಿದ್ದು, ಅವರ ಬಳಿ ಇದ್ದ ಬ್ಯಾಗನ್ನು ಡ್ರೈವರ್ ಸೀಟಿನ ಹಿಂಬದಿಯಲ್ಲಿ ಇಟ್ಟು ಅಲ್ಲೇ ಕುಳಿತಿದ್ದರು. ಆದರೆ ಬ್ಯಾಗಿನಲ್ಲಿ ಇರಿಸಿದ್ದ ಆ್ಯಸಿಡ್ ಇದ್ದ ಬಾಟಲಿ ಸಿಡಿದು ಆಕೆಯ ಅಕ್ಕಪಕ್ಕ ಕುಳಿತಿದ್ದ ಐದಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



Join Whatsapp