ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದಿಂದ ಸುಮಾರು 2 ಗಂಟೆಗಳ ಕಾಲ ನಡೆದ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಮಾರ್ಚ್ 25ಕ್ಕೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಮೂರು ದಿನಗಳ ಹಿಂದೆಯೇ ಹೆಚ್ ಡಿಕೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು. H.D.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ.