ಪ್ರಧಾನಿ ನರೇಂದ್ರ ಮೋದಿ ಭೂತಾನ್ ಪ್ರವಾಸದಲ್ಲಿದ್ದು, ಅಲ್ಲಿನ ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಫೋ ಎಂಬ ಅತ್ಯತ್ತಮ ನಾಗರಿಕ ಪ್ರಶಸ್ತಿ ಅವರಿಗೆ ಪ್ರದಾನ ಮಾಡಲಾಗಿದೆ.
ನರೇಂದ್ರ ಮೋದಿ ಅವರಿಗೆ ಭೂತಾನ್ ದೊರೆ ಜಿಗ್ಮೆ ಖೇಸರ್ ನಾಂಗೇಲ್ ವಾಂಗ್ ಚುಕ್ ಅವರು ಈ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇದು ನನ್ನ ವೈಯಕ್ತಿಕ ಸಾಧನೆಯಲ್ಲ. 140 ಕೋಟಿ ಭಾರತೀಯರ ಸಾಧನೆ. ನಾನು ಈ ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಲು ಇಚ್ಛಿಸುತ್ತೇನೆ. ಎಲ್ಲಾ ಭಾರತೀಯರ ಪರವಾಗಿ ನಾನು ಈ ಪ್ರಶಸ್ತಿ ಸ್ವೀಕರಿಸುತ್ತೇನೆ. ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
2021ರ ಡಿಸೆಂಬರ್ 17 ರಂದು ಭೂತಾನ್ ನ 114ನೇ ರಾಷ್ಟ್ರೀಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು.