ಕೋಲ್ಕತ್ತಾ: ಪಶ್ಚಿಮ ಬಂಗಾಳದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರ ನಿವಾಸ ಸೇರಿದಂತೆ ಕೋಲ್ಕತ್ತಾ ಮತ್ತು ಅವರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ ಎಂದು ವರದಿ ಹೇಳಿದೆ.
ಮಹುವಾ ಮೊಯಿತ್ರಾ ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ದುಬೈ ಮೂಲದ ಉದ್ಯಮಿ ಹೀರಾನಂದನಿ ಅವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಲೋಕಸಭಾ ನೈತಿಕ ಸಮಿತಿಯು, ಮಹುವಾ ಮೊಯಿತ್ರಾ ಅವರನ್ನು ದೋಷಿ ಎಂದು ಘೋಷಿಸಿ, ಸಂಸತ್ತಿನಿಂದ ಉಚ್ಚಾಟಿಸಲು ಲೋಕಸಭಾ ಸ್ಪೀಕರ್ ಅವರಿಗೆ ಶಿಫಾರಸು ಮಾಡಿತ್ತು. ಅದರಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿದ್ದರು.