ಮಂಗಳೂರು: ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ಮೂರು ಮಂದಿಯ ಹತ್ಯೆ ನಡೆದಿದ್ದು, ಘಟನೆಯ ಸತ್ಯಾಸತ್ಯತೆಯನ್ನು ನಿಷ್ಪಕ್ಷಪಾತ ತನಿಖೆಯ ಮೂಲಕ ಪತ್ತೆ ಹಚ್ಚಬೇಕು ಎಂದು ಎಸ್ ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಆಗ್ರಹಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಬೆಳ್ತಂಗಡಿಯ ಮೂವರು ಯುವಕರನ್ನು ಅತ್ಯಂತ ಕ್ರೂರವಾಗಿ ಹತ್ಯೆ ನಡೆಸಿದ ಹಂತಕರ ವಿರುದ್ಧ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಹಾಗೂ ಘಟನೆಯ ಸತ್ಯಾಸತ್ಯತೆಯನ್ನು ನಿಷ್ಪಕ್ಷಪಾತ ತನಿಖೆಯ ಮೂಲಕ ಪತ್ತೆ ಹಚ್ಚಬೇಕು,ಹಾಗೂ ಕುಟುಂಬಸ್ಥರಿಗೆ ಕರ್ನಾಟಕ ಸರ್ಕಾರ 25 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.