ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ

Prasthutha|

ಬೆಂಗಳೂರು: ಕೆಆರ್ ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.

- Advertisement -


ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್ ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್ ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್ ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.



Join Whatsapp