ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ದರ ಏಪ್ರಿಲ್ 1 ರಿಂದ ಹೆಚ್ಚುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. ಇದರ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್, ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
“ಏಪ್ರಿಲ್ 1, 2024 ರಿಂದ ಬಿಬಿಎಂಪಿ ಆಸ್ತಿ ತೆರಿಗೆ ದರವನ್ನು ಹೆಚ್ಚಿಸುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿ ಪೆಡ್ಲರ್ ಗಳು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ನನ್ನ ಗಮನಕ್ಕೆ ಬಂದಿದೆ. ಬಿಬಿಎಂಪಿ ಯಾವುದೇ ಆಸ್ತಿ ತೆರಿಗೆಯನ್ನು ಹೆಚ್ಚಿಸಿಲ್ಲ, 2016 ರಲ್ಲಿ ನಿಗದಿಪಡಿಸಿದ ದರದಲ್ಲಿಯೇ ವಿಧಿಸಲಾಗುವುದು. ದಯವಿಟ್ಟು ಈ ಬಗ್ಗೆ ಯಾವುದೇ ವದಂತಿಗಳನ್ನು ನಂಬಬೇಡಿ” ಎಂದು ಮನವಿ ಮಾಡಿದ್ದಾರೆ.