ಏಪ್ರಿಲ್ 12ರಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ: ಈಶ್ವರಪ್ಪ

Prasthutha|

ಶಿವಮೊಗ್ಗ: ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ
ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

- Advertisement -


ಶಿವಮೊಗ್ಗ ನಗರದಲ್ಲಿ ಬೆಂಬಲಿಗರ ಸಮಾವೇಶದಲ್ಲಿ ಮಾತನಾಡಿದ ಈಶ್ವರಪ್ಪ, ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆಗೆ ಸ್ಪರ್ಧಿಸುವುದು ನಿಶ್ಚಿತ. ಏಪ್ರಿಲ್ 12 ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. 25 ಸಾವಿರ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದರು.


ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರಿಗೆ ಸೋಲಿನ ಭಯ ಶುರುವಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಗೆಲುವಿಗಾಗಿ ಶಿಕಾರಿಪುರದ ಕ್ಷೇತ್ರದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿದ್ದರು. ಹೀಗಾಗಿ ಕಾಂಗ್ರೆಸ್ನಿಂದ ಡಮ್ಮಿ ಅಭ್ಯರ್ಥಿ ಹಾಕಿದ್ದರು. ಅದರಂತೆ ಹೊಂದಾಣಿಕೆ ಯಶಸ್ವಿಯಾಗಿದೆ. ಲೋಕಸಭೆ ಚುನಾವಣೆಗೂ ಸಚಿವ ಮಧು ಬಂಗಾರಪ್ಪ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಆ ಪಕ್ಷದಿಂದ ಡಮ್ಮಿ ಅಭ್ಯರ್ಥಿ ಹಾಕಲಾಗಿದೆ. ಆದರೆ, ಈ ಬಾರಿ ಹೊಂದಾಣಿಕೆ ರಾಜಕಾರಣ ಯಶ್ವಿಯಾಗುವುದಿಲ್ಲ. ನಾನು 1 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದರು.



Join Whatsapp