ಮಂಗಳೂರು: ಬೀದಿ ನಾಟಕದ ಮೂಲಕ ನಗರದೆಲ್ಲೆಡೆ ಮತದಾನ ಜಾಗೃತಿ

Prasthutha|

ಮಂಗಳೂರು:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಂಗಳೂರು ತಾಲೂಕು ಪಂಚಾಯತ್ ಸಹಯೋಗದಲ್ಲಿ ಇಂದು ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣ, ಸಿಟಿ ಸೆಂಟರ್, ಪ್ರೆಸ್ ಕ್ಲಬ್ ಹಾಗೂ ಬೆಂಗರೆ ಪರಿಸರದಲ್ಲಿ ಬಳಿ ಸೇಂಟ್ ಆಗ್ನೇಸ್ ವಿದ್ಯಾರ್ಥಿಗಳಿಂದ ಬೀದಿನಾಟಕ ಮೂಲಕ ಮತದಾನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

- Advertisement -

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ ಮಾತನಾಡಿ, ಮತದಾನದ ಪ್ರಾಮುಖ್ಯತೆ ಬಗ್ಗೆ ಸಾರ್ವಜನಿಕರಿಗೆ ಬೀದಿನಾಟಕ ಮೂಲಕ ಅದ್ಭುತವಾಗಿ ವಿದ್ಯಾರ್ಥಿಗಳು ತಿಳಿಸಿಕೊಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಎಪ್ರಿಲ್ 26 ರಂದು ಅರ್ಹ ಮತದಾರರೆಲ್ಲರೂ ಮತಗಟ್ಟೆಗೆ ಬಂದು ಮತದಾನ ಮಾಡುವಂತೆ ಕರೆ ನೀಡಿದರು.

ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಪ್ಪಣ್ಣ ಕೆ.ಸಿ , ಸಹಾಯಕ ನಿರ್ದೇಶಕರು (ಗ್ರಾ.ಉ) ಮಹೇಶ್ ಅಂಬೆಕಲ್ಲು, ಎನ್ಎಸ್ಎಸ್ ಅಧಿಕಾರಿ ಡಾ. ಉದಯ ಕುಮಾರ್, ಸ್ವೀಪ್ ಸಮಿತಿ ಸದಸ್ಯ ಡೊಂಬಯ್ಯ ಇಡ್ಕಿದು, ತಾಲೂಕು ಪಂಚಾಯತ್ ಐಇಸಿ ಸಂಯೋಜಕಿ ನಿಶ್ಮಿತ ಬಿ. ಹಾಗೂ ಜಿಲ್ಲಾ ಹಾಗೂ ತಾಲೂಕು ಪಂವಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.



Join Whatsapp