ರಾಜ್ಯದ ಹಲವಡೆ ಲೋಕಾಯುಕ್ತ ದಾಳಿ: ಪಿಡಿಒ ವಶಕ್ಕೆ

Prasthutha|

ಬೆಂಗಳೂರು​: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ರಾಜ್ಯದ ಹಲವಡೆ ದಾಳಿ ಮಾಡಿದ್ದಾರೆ.

- Advertisement -

ರಾಮನಗರ ತಾಲೂಕಿನ ಬಿಡದಿಯ ಮಂಚನಾಯಕನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ಯತೀಶ್ ಚಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈಗಲ್ಟನ್ ರೆಸಾರ್ಟ್​​ ನಲ್ಲಿ ಪಿಡಿಓ‌ ಯತೀಶ್​ ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಲೋಕಾಯುಕ್ತ‌ ಅಧಿಕಾರಿಗಳು ಯತೀಶ್​ ಚಂದ್ರ ಅವರಿಗೆ ಸೇರಿದ ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ.



Join Whatsapp