ಸುಮಲತಾಗೆ ಸೂಕ್ತ ಸ್ಥಾನಮಾನ ಸಿಗಲಿದೆ: ಯಡಿಯೂರಪ್ಪ

Prasthutha|

ಬೆಳಗಾವಿ: ಮಂಡ್ಯ ಕ್ಷೇತ್ರದಿಂದ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುವುದು ಖಚಿತವಾಗಿರುವುದರಿಂದ ಸುಮಲತಾ ಅವರೊಂದಿಗೆ ದೆಹಲಿ ವರಿಷ್ಠರು ಮಾತಾಡಲಿದ್ದಾರೆ, ಅವರಿಗೆ ಸೂಕ್ತ ಸ್ಥಾನಮಾನ ಖಂಡಿತವಾಗಿಯೂ ನೀಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

- Advertisement -


ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ನಿಧಿ ಇದುವರೆಗೆ ಬಿಡುಗಡೆ ಮಾಡಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಷಯದ ಬಗ್ಗೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ ಎಂದು ಹೇಳಿದ್ದಾರೆ.



Join Whatsapp