ಬೆಂಗಳೂರು: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ 7ನೇ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಪ್ರಕಟಿಸಿದೆ. ಕಗ್ಗಂಟಾಗಿದ್ದಂತ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಾಗಿದ್ದು, ಮಾಜಿ ಡಿಸಿಎಂ ಗೋವಿಂದ ಕಾರಜೋಳ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
ಪ್ರಕಟಿತ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಲೋಕಸಭಾ ಕ್ಷೇತ್ರಕ್ಕೆ ನವನೀತ್ ರಾಣಾಗೆ ಟಿಕೆಟ್ ನೀಡಲಾಗಿದೆ. ಕರ್ನಾಟಕದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕುತೂಹಲಕ್ಕೆ ತೆರೆ ಎಳೆದ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವ ಎ. ನಾರಾಯಣಸ್ವಾಮಿಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಮಿಸ್ ಆಗಿದೆ.