ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಝ್ ಅಹಮದ್ ಅಮಾನತು

Prasthutha|

ದಾವಣಗೆರೆ: ಹರಿಹರ ತಾಲೂಕಿನ ಎಂಕೆಇಟಿಎಲ್ ಕೆ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಝ್ ಅಹಮದ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ಆದೇಶಿಸಿದ್ದಾರೆ.

- Advertisement -

ಬುಧವಾರ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯುತ್ತಿರುವಾಗ ವಿದ್ಯಾರ್ಥಿಗಳು ಪರಸ್ಪರ ಸಂಭಾಷಣೆಯಲ್ಲಿ ತೊಡಗಿದ್ದರೂ ರಿಯಾಝ್ ಅಹಮದ್ ಮೇಲ್ವಿಚಾರಕರಾಗಿ ಪರೀಕ್ಷಾ ಶಿಸ್ತು, ಗೌಪ್ಯತೆ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿರುವ ಕಾರಣ ನೀಡಿ ಅಮಾನತು ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೇಂದ್ರದ ಕೊಠಡಿಯಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದ್ದು, ನೇರ ದೃಶ್ಯಾವಳಿಗಳನ್ನು ಶಿಕ್ಷಣ ಇಲಾಖೆ ಆಯುಕ್ತರು ವೀಕ್ಷಣೆ ಮಾಡಿದ್ದು, ರಿಯಾಝ್ ಅಹಮದ್ ಕರ್ತವ್ಯಲೋಪ ಎಸಗಿರುವುದು ಸ್ಪಷ್ಟವಾಗಿದೆ ಎಂದು ಹೇಳಲಾಗಿದೆ.



Join Whatsapp