ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ನಿಧನ

Prasthutha|

ಕೊಯಮತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ.ಗಣೇಶಮೂರ್ತಿ (77) ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

- Advertisement -


ಪೊಲೀಸರ ಪ್ರಕಾರ, ಎಂಡಿಎಂಕೆ ಪಕ್ಷದ ಗಣೇಶಮೂರ್ತಿ ಅವರು ಮಾರ್ಚ್ 24ರಂದು ತಮ್ಮ ನಿವಾಸದಲ್ಲಿ ವಿಷಯುಕ್ತ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಈ ಸಂಬಂಧ ಈರೋಡ್ ಟೌನ್ ಪೊಲೀಸರು ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿದ್ದರು.


ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಇನ್ಸ್ಟಿಟ್ಯೂಟ್ ಆಫ್ ರೋಡ್ ಟ್ರಾನ್ಸ್ಪೋರ್ಟ್ (ಐಆರ್ಟಿ) ವೈದ್ಯಕೀಯ ಕಾಲೇಜಿಗೆ ಸಾಗಿಸಲಾಗಿದೆ. ಬಳಿಕ ಕುಮಾರವಲಸು ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



Join Whatsapp