ನನ್ನ ಸೋಲಿನ ಬಗ್ಗೆ ಹೇಳಲು ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು: ಕುಮಾರಸ್ವಾಮಿ ಪ್ರಶ್ನೆ

Prasthutha|

ಮೈಸೂರು: ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

- Advertisement -


ಮೈಸೂರಿನಲ್ಲಿ ಮಾತನಾಡಿದ ಅವರು, ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ ಎಂದರು.


ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿ ನೀವು (ಸಿದ್ದರಾಮಯ್ಯ) ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಕುಮಾರಸ್ವಾಮಿ ಕೇಳಿದರು.



Join Whatsapp