ಕೋಲಾರದ ಕಾಂಗ್ರೆಸ್ ಟಿಕೆಟ್ ವಿಚಾರ: ಸಿಎಂ ನಿವಾಸದಲ್ಲಿ ನಡೆದ ಸಂಧಾನ ಸಭೆ ಯಶಸ್ವಿ

Prasthutha|

ಕೋಲಾರ: ಕೋಲಾರ ಲೋಕಸಭಾ ಟಿಕೆಟ್​ ಸಂಬಂಧ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಅಸಮಾಧಾನದ ಹಿನ್ನೆಲೆಯಲ್ಲಿ ಇಂದು ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅಸಮಾಧಾನ ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಸಂಧಾನ ಸಭೆಯ ಬಳಿಕ ಮಾತನಾಡಿದ ಸಚಿವ ಭೈರತಿ ಸುರೇಶ್, ಕೋಲಾರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಟಿಕೆಟ್ ಯಾರಿಗೆ ನೀಡಿದರೂ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.

ಏನೇ ಭಿನ್ನ ಅಭಿಪ್ರಾಯ ಇದ್ದರೂ ಸರಿಪಡಿಸುವುದಾಗಿ ಸಿಎಂ ನಿವಾಸದ ಕಾವೇರಿ ಬಳಿ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.

- Advertisement -

ಸಿಎಂ ಮತ್ತು ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಅವಕಾಶ ನೀಡುವುದಿಲ್ಲ. ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಅವರು ಹೇಳಿದಂತೆ ನಡೆದುಕೊಳ್ಳುತ್ತೇವೆ. ನಿನ್ನೆ ಆದಂತಹ ಸಮಸ್ಯೆ ಬಗ್ಗೆ ಸಿಎಂ ಡಿಸಿಎಂ ಬಳಿ ಹೇಳಿಕೊಂಡಿದ್ದೇವೆ. ರಾಜಿನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸಿಎಂ ನಿವಾಸ ಕಾವೇರಿ ಬಳಿ ಸಚಿವರು ತಿಳಿಸಿದರು.



Join Whatsapp