ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಭಾರತದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್

Prasthutha|

ನವದೆಹಲಿ: ಭಾರತದ ಅತ್ಯಂತ ಶ್ರೀಮಂತ ಮಹಿಳೆ ಎಂಬ ಖ್ಯಾತಿಯ ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

- Advertisement -

ಪುತ್ರ, ಮಾಜಿ ಸಂಸದ ನವೀನ್ ಜಿಂದಾಲ್ ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರಿದ ಕೆಲವು ದಿನಗಳ ನಂತರ ಸಾವಿತ್ರಿ ಜಿಂದಾಲ್ ಅದೇ ಹಾದಿ ಹಿಡಿದಿದ್ದು, ಮಗಳು ಸೀಮಾ ಜಿಂದಾಲ್ ಕೂಡ ಬಿಜೆಪಿಗೆ ಸೇರಿದ್ದಾರೆ.

ಸಾವಿತ್ರಿ ಜಿಂದಾಲ್ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಕುರುಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ.

- Advertisement -

ಹರಿಯಾಣದ ಮಾಜಿ ಸಚಿವೆ ನಿನ್ನೆ ತಡರಾತ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಘೋಷಿಸಿದ್ದರು.

ಹಿಸಾರ್ ಜನರು ನನ್ನ ಕುಟುಂಬ ಮತ್ತು ನನ್ನ ಕುಟುಂಬದ ಸಲಹೆಯ ಮೇರೆಗೆ ನಾನು ಇಂದು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ತಮ್ಮ ಪೋಸ್ಟ್ ನಲ್ಲಿ ಬರೆದಿದ್ದರು.



Join Whatsapp