ಮುಖ್ತಾರ್ ಅನ್ಸಾರಿ ಮೃತ್ಯು: ನ್ಯಾಯಾಂಗ ತನಿಖೆಗೆ ಆದೇಶಿಸಿದ ಬಾಂಡಾ ಜಿಲ್ಲಾ ನ್ಯಾಯಾಲಯ

Prasthutha|

ಲಖನೌ: ಜೈಲಿನಲ್ಲಿದ್ದ ಮಾಜಿ ಶಾಸಕ, ಗ್ಯಾಂಗ್ ಸ್ಟರ್ ಮುಖ್ತಾರ್ ಅನ್ಸಾರಿ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸುವಂತೆ ಉತ್ತರಪ್ರದೇಶ ಬಾಂಡಾ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.

- Advertisement -


ಪ್ರಕರಣದ ತನಿಖೆಗೆ ಹೆಚ್ಚುವರಿ ಮುಖ್ಯ ನ್ಯಾಯಾಧೀಶ ಗರಿಮ್ ಸಿಂಗ್ ಅವರನ್ನು ನೇಮಿಸಿ ಬಾಂಡಾ ಜಿಲ್ಲಾ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಭಗವಾನ್ದಾಸ್ ಗುಪ್ತಾ ಆದೇಶಿಸಿದ್ದಾರೆ.


ಪ್ರಕರಣದ ತನಿಖೆ ನಡೆಸಿ ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ.



Join Whatsapp