ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ಸೇರ್ಪಡೆಯಾದ ತೇಜಸ್ವಿನಿಗೌಡ

Prasthutha|

ಬೆಂಗಳೂರು: ವಿಧಾನಪರಿಷತ್ ನ ಮಾಜಿ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ಅವರು ಇಂದು (ಶನಿವಾರ) ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

- Advertisement -


ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಸಮ್ಮುಖದಲ್ಲಿ ತೇಜಸ್ವಿನಿ ಕಾಂಗ್ರೆಸ್ ಗೆ ಸೇರಿದ್ದಾರೆ.


ತೇಜಸ್ವಿನಿಗೌಡ ಅವರು ಪರಿಷತ್ನ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದರು.

- Advertisement -



Join Whatsapp