ಮಂಗಳೂರು: ಇಲ್ಲಿನ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಏಪ್ರಿಲ್ 8 ರಂದು ಬೆಳಿಗ್ಗೆ 11 ಗಂಟೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ
ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062518, ಪೊಲೀಸ್ ಉಪಾಧಿಕ್ಷಕರ ಕಚೇರಿ-1 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ-2 9364062580, ಪೊಲೀಸ್ ನಿರೀಕ್ಷಕರ ಕಚೇರಿ: 9364062691 ಸಂಖ್ಯೆಗಳನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.