ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರನ್ನು ನಾರಾಯಣಗುರು ವಿಚಾರ ವೇದಿಕೆ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ.
ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಮುದಾಯವೂ ಪಕ್ಷದ ಬದಲು ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಶ್ರಮಿಸುವವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬ್ರಾಹ್ಮಣ, ಬಂಟ ಆಗಿದ್ರೆ ಸೀಟ್ ಸಿಗಬಹುದಿತ್ತೇನೋ, ಏನ್ಮಾಡೋದು ನಾನು ಶೂದ್ರನಾಗಿ ಹುಟ್ಟಿದೆ ಎಂದು ಅಸಮಾಧಾನ ಹೊರಹಾಕಿದರು.