ಸಿರಿಯಾದಲ್ಲಿರುವ ಇರಾನ್ ರಾಯಭಾರ ಕಚೇರಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ: 6 ಸಾವು

Prasthutha|

ಡಮಾಸ್ಕಸ್: ಸಿರಿಯಾದ ರಾಜಧಾನಿ ಡಮಾಸ್ಕಸ್‌ನಲ್ಲಿರುವ ಇರಾನ್ ರಾಯಭಾರ ಕಚೇರಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ಆರು ಜನರು ಸಾವನ್ನಪ್ಪಿದ್ದಾರೆ.

- Advertisement -

ಡಮಾಸ್ಕಸ್‌ನ ಮಝೆಹ್ ನೆರೆಹೊರೆಯಲ್ಲಿರುವ ಇರಾನಿನ ದೂತಾವಾಸ ಕಟ್ಟಡವನ್ನ ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎಂದು ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ ಸನಾ ತಿಳಿಸಿದೆ.

ಡಮಾಸ್ಕಸ್ನಲ್ಲಿರುವ ಇರಾನ್ ರಾಯಭಾರ ಕಚೇರಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಲವರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂದು ಸಿರಿಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

- Advertisement -

ಡಮಾಸ್ಕಸ್‌ನಲ್ಲಿ ಇಸ್ರೇಲಿ ದಾಳಿಯು ಅನೆಕ್ಸ್ ಕಟ್ಟಡವನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಆದರೆ ರಾಯಭಾರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯ ಇರಾನಿನ ವರದಿಗಳು ಹೇಳಿವೆ.



Join Whatsapp