ಬೆಂಗಳೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ರಂಗದ 4 ಪ್ರಮುಖ ವ್ಯಕ್ತಿಗಳನ್ನು ರಾಯಭಾರಿಯಾಗಿ ನಿಯೋಜನೆ ಮಾಡಲಾಗಿದೆ.
ಬೆಂಗಳೂರು ನಗರದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ‘ನಮ್ಮ ಬೆಂಗಳೂರು ಐಕಾನ್ಸ್’ ಹೆಸರಿನಲ್ಲಿ ನಟ, ರಮೇಶ್ ಅರವಿಂದ್, ನಟಿ ಹಾಗೂ ರೂಪದರ್ಶಿ ನೀತು ವನಜಾಕ್ಷಿ, ಬ್ಯಾಡ್ಮಿಂಟನ್ ಆಟಗಾರ ಅನುಪ್ ಶ್ರೀಧರ್ ಹಾಗೂ ಟೇಬಲ್ ಟೆನ್ನಿಸ್ ಆಟಗಾರ್ತಿ ಅರ್ಚನಾ ಜಿ ಕಾಮತ್ ರಾಯಭಾರಿ ಆಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರಾಯಭಾರಿಗಳ ನೇಮಕ ಮಾಡಿದ್ದಾರೆ.