ನವದೆಹಲಿ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ತೂಕದಲ್ಲಿ (65 ಕೆ.ಜಿ) ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ತಿಹಾರ್ ಜೈಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಬಂಧನವಾದ ಬಳಿಕ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ದೇಹದ ತೂಕ ಗಣನೀಯವಾಗಿ ಇಳಿಕೆಯಾಗುತ್ತಿದೆ. ಅವರನ್ನು ಜೈಲಿಗೆ ಹಾಕುವ ಮೂಲಕ ಬಿಜೆಪಿಯು ಅವರ ಆರೋಗ್ಯವನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಎಎಪಿ ಹಿರಿಯ ನಾಯಕಿ ಆತಿಶಿ ಆರೋಪಿಸಿದ್ದರು.
ಇದಾದ ಕೆಲವೇ ಗಂಟೆಗಳಲ್ಲಿ ತಿಹಾರ್ ಜೈಲಿನ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್ ಅವರ ತೂಕದಲ್ಲಿ ವ್ಯತ್ಯಾಸವಾಗಿಲ್ಲ. ಜತೆಗೆ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದ್ದಾರೆ.