ಉವೈಸಿ ಎದುರು ಕಣದಲ್ಲಿರುವ ಬಿಜೆಪಿ‌ ಅಭ್ಯರ್ಥಿಗೆ ವೈ+ ಭದ್ರತೆ

Prasthutha|

ನವದೆಹಲಿ: ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಹೈದರಾಬಾದ್​ನ ಕೊಂಪೆಲ್ಲಾ ಮಾಧವಿ ಲತಾ ಮತ್ತು ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಸೀತಾ ಸೊರೆನ್‌ ಅವರಿಗೆ ಕೇಂದ್ರ ಸರ್ಕಾರ ವೈ ಪ್ಲಸ್​ ಭದ್ರತೆಯನ್ನು ಒದಗಿಸಲು ಮುಂದಾಗಿದೆ.

- Advertisement -

ಕಳೆದ 40 ವರ್ಷಗಳಿಂದ ಅಸಾದುದ್ದೀನ್ ಉವೈಸಿ ಮನೆತನದ ಭದ್ರಕೋಟೆಯಾಗಿರುವ ಹೈದರಾಬಾದ್ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಅಸಾದುದ್ದೀನ್‌ ಉವೈಸಿ ಎದುರು ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಕಣಕ್ಕಿಳಿಸಿದೆ.

ಹೈದರಾಬಾದ್‌ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿರುವ ಮಾಧವಿ ಲತಾ ಅಥವಾ ಕೊಂಪೆಲ್ಲಾ ಮಾಧವಿ ಲತಾ ಅವರು ಹೈದರಾಬಾದ್‌ನಲ್ಲಿ ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಸಾಂಸ್ಕೃತಿಕ ಪ್ರತಿನಿಧಿ ಆಗಿರುವ ಇವರು ಹೈದರಾಬಾದ್‌ನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥರಾಗಿದ್ದಾರೆ.

- Advertisement -

ಮಾಧವಿ ಲತಾಗೆ ಅವರಿಗೆ ಬೆದರಿಕೆಯ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳ ಗ್ರಹಿಕೆಯ ಹಿನ್ನೆಲೆಯಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಲಾಗಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯು ಬಿಜೆಪಿ ಅಭ್ಯರ್ಥಿಗಳಿಬ್ಬರಿಗೆ ವೈ ಪ್ಲಸ್ ಭದ್ರತೆಯನ್ನು ಒದಗಿಸಿದೆ. ವಿಐಪಿ ಭದ್ರತೆಯ ಭಾಗವಾಗಿ ಮಾಧವಿಲತ್‌ಗೆ 11 ಸಿಆರ್​ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ. ಮಾಧವಿಲತಾ ಅವರ ಮನೆಗೆ ಇನ್ನೂ ಐವರು ಶಸ್ತ್ರಸಜ್ಜಿತ ಸಿಬ್ಬಂದಿ ಭದ್ರತೆ ಒದಗಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭೆ ಚುನಾವಣೆಗೂ ಮುನ್ನ ಜಾರ್ಖಂಡ್‌ನ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಸಂಸ್ಥಾಪಕ ಶಿಬು ಸೊರೆನ್ ಅವರ ಸೊಸೆ ಸೀತಾ, ಜೆಎಂಎಂ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ನಂತರ ಬಿಜೆಪಿ ಸೇರ್ಪಡೆಯಾಗಿದ್ದರು.



Join Whatsapp